ಕರ್ನಾಟಕ ರಾಜ್ಯ ರೈತ ಸಂಘ ಏಕೀಕರಣ ಸಮಿತಿಯ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.16 ರಂದು ಪ್ರತಿಭಟನೆ. ರೈತ ಸಂಘ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಹೇಳಿಕೆ
ಒಂದು ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5000 ರೂ. ತೆರಿಗೆ ಹಣದಿಂದ ಒಂದು ಟನಗೆ 2000 ರೂ ಕಡ್ಡಾಯವಾಗಿ ಕೊಡಲೇಬೇಕು ಮತ್ತು ರೈತರ ಸಂಪೂರ್ಣ ಸಾಲಮನ್ನಾ ಮಾಡುವುದರ ಜೋತೆಗೆ ಕಾನೂನಾತ್ಮಕ ಸಾಲ ವಸೂಲಾತಿ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಹೇಳಿದರು ಭಾನುವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ರಾಜ್ಯದಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಜಾರಿಗೆಗೋಳಿಸುವುದು. ಹಾಗೂ ನೈಸರ್ಗಿಕ ಮತ್ತು ಸಾವಯುವ ಕೃಷಿಗೆ ಉತ್ತೆಜನ ಬಿಡುವುದು ಮತ್ತು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ. 16 ರಂದು ಸುವರ್ಣ ಸೌಧದ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು






