

22nd January 2025
ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ
ಸಚಿವ ಅಮಿತ್ ಶಾ ರಾಜೀನಾಮೆ ನೀಡಲಿ: ವೆಂಕಟೇಶಯ್ಯ
ಗದಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಂತ ಆಗ್ರಹಿಸಿ ಜನೇವರಿ 23ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಹಮ್ಮಿಕೋಳ್ಳಲಾಗಿದೆ ಎಂದು ದಲಿತ ಮುಖಂಡ ಎನ್ ವೆಂಕಟೇಶಯ್ಯ ಹೇಳಿದರು.
ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಅಂಬೇಡ್ಕರ್ ಹೆಸರು ಹೇಳುವುದು ಕೇಲವರಿಗೆ ಷ್ಯಾಷನ್ ಆಗಿದೆ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೊತೆಗೇ "ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ನಾಮಸ್ಮರಣೆ ಮಾಡಿದರೇ ಸ್ವರ್ಗಕ್ಕೆ ಹೊಗಬಹುದಿತ್ತು" ಎಂದು ಸಂಸತ್ತಿನಲ್ಲಿ ಭಾಷಣ ಮಾಡುವಾಗ ನಾಲಿಗೆ ಹರಿಬಿಟ್ಟಿದ್ದು ಸರಿಯಾದ ಕ್ರಮ ಅಲ್ಲ ಅಂತ ಗುಡುಗಿದರು.
ಡಾ. ಅಂಬೇಡ್ಕರ್ ಅವರು ಕೇವಲ ಭಾರತ ರತ್ನ ಮಾತ್ರವಲ್ಲ ವಿಶ್ವದ ರತ್ನವಾಗಿ ಹೊರಹೊಮ್ಮಿದ್ದಾರೆ. ಅಂಬೇಡ್ಕರ್ ಜನಿಸಿದ ರಾಷ್ಟ್ರದಲ್ಲಿ ಕೆಲವು ದುಷ್ಟಶಕ್ತಿಗಳಿದ್ದು, ಇತ್ತಿಚೆಗೆ ಅಂಬೇಡ್ಕರ್ ವಿರುದ್ದ ಹೇಳಿಕೆ ನೀಡಿರುವ ಅಮಿತ್ ಶಾ ಇದಕ್ಕೆ ತಾಜಾ ಉದಾಹರಣೆಯಾಗಿದ್ದಾರೆ. ಅವರನ್ನು ಈ ಕೂಡಲೇ ದೇಶದಿಂದ ಗಡಿಪಾರು ಮಾಡಿ ಭಾರತವನ್ನು ಸ್ವಚ್ಚಮಾಡಬೇಕು ಅಂತ ಆಗ್ರಹಿಸಿದರು.
ಭಾರತೀಯ ಜನತಾ ಪಕ್ಷ ಆರ್ ಎಸ್ ಎಸ್ ಸಿದ್ದಾಂತದ ಪ್ರಕಾರ ಕೆಲಸ ಮಾಡುತ್ತಿದೆ. ಆರ್ ಎಸ್ ಎಸ್ ನವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಮತ್ತು ಹಿಂದಿನಿಂದಲೂ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರಿಗೆ ಅವಮಾನ ಮಾಡುತ್ತಾ ಬಂದಿದೆ. ಇವತ್ತು ದೇಶದಲ್ಲಿ ಸಮಾನತೆಯಿಂದ ಬದುಕಲು ಅಂಬೇಡ್ಕರ್ ಹಾಕಿಕೊಟ್ಟ ದಾರಿ ಕಾರಣವಾಗಿದ್ದು, ಬಿಜೆಪಿ ಇದೆಲ್ಲವನ್ನು ಮರೆತು ದುರಹಂಕಾರದಿಂದ ಆಡಳಿತ ನಡೆಸುತ್ತಿದೆ ಎಂದು ಎನ್ ವೆಂಕಟೇಶಯ್ಯ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದರು.
ಈ ಸಂದರ್ಭದಲ್ಲಿ ಬಸವರಾಜ ಸತ್ಯಮ್ಮನವರ, ರಮೇಶ್ ಬಾಳನ್ನವರ, ಪ್ರಕಾಶ್ ಕೆಲೂರ, ವಾಸುದೇವ ಹುಣಸಿಮರದ, ರಮೇಶ ಹುಣಸಿಮರದ, ಗುರುಫಾಜ್ ಭಜಂತ್ರಿ, ಮಹೇಶ್ ಹುಣಸಿಮರದ, ಹನುಮಂತ ಸಾಲಿ ಉಪಸ್ಥಿತರಿದ್ದರು.

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ - ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ-- -ಎಸಿಪಿ ನಾರಾಯಣ ಬರಮನಿ ಅಭಿಮತ

ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲರಿಂದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹೆಚ್ಚುವರಿ ಹೊಸ ಕೊಠಡಿಗಳ ಕಾಮಗಾರಿಗೆ ಭೂಮಿ ಪೂಜೆ

ಪರಿಮಳ ಪ್ರಕಾಶನ ಮತ್ತು ಪರಿಮಳ ಸಾಂಸ್ಕೃತಿಕ ವಾಹಿನಿ ಸಹಯೋಗದಲ್ಲಿ ಬೆಳಗಾವಿ ಸಾಹಿತ್ಯೋತ್ಸವ -2025