ಹೊಳಲ್ಕೆರೆ: ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿ ವಾತಾವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಬಾಬು ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ, ಬಲಿದಾನ ಮಾಡಿದ ಅನೇಕ ಮಹನೀಯರನ್ನು ಸ್ಮರಿಸಿ, ಅವರ ಆದರ್ಶಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್ ಅವರು ಮಾತನಾಡಿ, ತಾಲೂಕಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಪಾಡಿಗಟ್ಟ ಸುರೇಶ್, ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುರೇಶ್, ಲೆಕ್ಕಾಧಿಕಾರಿ ಶ್ರೀಮತಿ ರುದ್ರಮ್ಮ ಸೇರಿದಂತೆ ಪಂಚಾಯತ್ ಸಿಬ್ಬಂದಿ ಮಹೇಶ್, ವಿನಯ್ ಕುಮಾರ್, ತಿಮ್ಮಪ್ಪ, ರಮೇಶ್, ಕೊಡಿ ಕರಿಯಪ್ಪ, ಭರತ್, ಗಿರಿಧರ್, ಅರುಣ್ ಕುಮಾರ್ ನಾಯಕ್, ಉಮಾಶಂಕರ್, ವಸತಿ ಇಲಾಖೆಯ ನೋಡಲ್ ಅಧಿಕಾರಿ ಪ್ರವೀಣ್ ಕುಮಾರ್, ಮಂಜುನಾಥ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮದ ಸಂದೇಶದೊಂದಿಗೆ ಅರ್ಥಪೂರ್ಣವಾಗಿ ನೆರವೇರಿತು.
ವರದಿ: ನಾಗರಾಜ ಕೆ. ✍️







