ಬಳ್ಳಾರಿ: ಬಾಲಕಿಯರ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೆನರಾ ಬ್ಯಾಂಕ್ನ ಪ್ರಾದೇಶಿಕ ಕಚೇರಿ, ಬಳ್ಳಾರಿ ವತಿಯಿಂದ ‘ಕೆನರಾ ವಿದ್ಯಾ ಜ್ಯೋತಿ’ ಕಾರ್ಯಕ್ರಮವನ್ನು ಆಗಸ್ಟ್ 15ರಂದು ಆಯೋಜಿಸಲಾಗಿದೆ.
ಕಾರ್ಯಕ್ರಮವು ಆಗಸ್ಟ್ 15ರಂದು ಸಂಜೆ 4 ಗಂಟೆಗೆ ಬಳ್ಳಾರಿಯ ಬಿಡಿಎ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಬಾಲಕಿಯರ ಶಿಕ್ಷಣ ಮತ್ತು ಅವರ ಉಜ್ವಲ ಭವಿಷ್ಯಕ್ಕೆ ಪ್ರೋತ್ಸಾಹ ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಕಾರ್ಯಕ್ರಮಕ್ಕೆ ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಐಎಎಸ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಂ.ಡಿ. ಹಾರಿಸ್ ಸುಮೇರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
‘ಇಂದು ಆಕೆಯನ್ನು ಸಬಲಗೊಳಿಸಿ, ನಾಳೆಯನ್ನು ಪ್ರೇರೇಪಿಸಿ’ ಎಂಬ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಬಾಲಕಿಯರ ಶಿಕ್ಷಣ, ಆತ್ಮವಿಶ್ವಾಸ ಮತ್ತು ಭವಿಷ್ಯದ ಅವಕಾಶಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಮತ್ತು ಪೋಷಕರು ಭಾಗವಹಿಸುವಂತೆ ಕೆನರಾ ಬ್ಯಾಂಕ್ನ ಬಳ್ಳಾರಿ ಪ್ರಾದೇಶಿಕ ಕಚೇರಿ ಮನವಿ ಮಾಡಿದೆ.







