ಬಳ್ಳಾರಿ : ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸಂಗನಕಲ್ಲು ಗ್ರಾಮದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸುಮಾರು 25 ಅಡಿ ಉದ್ದದ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ದೇಶಭಕ್ತಿ ಘೋಷಣೆಗಳೊಂದಿಗೆ ನಡೆದ ಮೆರವಣಿಗೆ ಗ್ರಾಮಸ್ಥರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಟಿ. ನಾಗರಾಜ್, ವಕೀಲ ತುಳಸಪ್ಪ, ಮಹೇಶ್, ನೆಟ್ಟೆಪ್ಪ, ಹನುಮಂತಪ್ಪ, ವಿಜಯ್ ಕುಮಾರ್ ಸರ್, ಬುಗ್ಗಯ್ಯ, ನೀಲಕಂಠ, ಪವನ್ ಕುಮಾರ್ ಸೇರಿದಂತೆ ಊರಿನ ಹಿರಿಯರು, ಮುಖಂಡರು ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು.
ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದರ ಜೊತೆಗೆ ಮಕ್ಕಳಲ್ಲಿ ದೇಶಪ್ರೇಮ, ರಾಷ್ಟ್ರಭಕ್ತಿ ಹಾಗೂ ಸ್ವಾತಂತ್ರ್ಯದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೃಹತ್ ರಾಷ್ಟ್ರಧ್ವಜದೊಂದಿಗೆ ನಡೆದ ಮೆರವಣಿಗೆ ಗ್ರಾಮದಲ್ಲಿ ದೇಶಭಕ್ತಿಯ ವಾತಾವರಣ ನಿರ್ಮಿಸಿತು.







